Site icon Kundapra.com ಕುಂದಾಪ್ರ ಡಾಟ್ ಕಾಂ

ಕೋಟ: ಸ್ಕೂಟಿಗೆ ಗೂಡ್ಸ್ ರಿಕ್ಷಾ ಢಿಕ್ಕಿಯಾಗಿ ಸ್ಕೂಟಿ ಸವಾರ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಇಲ್ಲಿನ  ಸಾಲಿಗ್ರಾಮದ ಚೇಂಪಿಯಲ್ಲಿ ಸ್ಕೂಟಿಗೆ ಗೂಡ್ಸ್ ರಿಕ್ಷಾ ಢಿಕ್ಕಿಯಾಗಿ ಸ್ಕೂಟಿ ಸವಾರ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಸ್ಕೂಟಿ ಸವಾರ ಸ್ಥಳೀಯ ಗುಂಡ್ಮಿ ನಿವಾಸಿ ಅನಂತ ಹೆಗ್ಡೆ (45) ಮೃತರು.

ಬ್ರಹ್ಮಾವರ ಕಡೆಯಿಂದ ಕುಂದಾಪುರ ಕಡಗೆ ಚಲಿಸುತ್ತಿದ್ದ ಗೂಡ್ಸ್ ರಿಕ್ಷಾಕ್ಕೆ ಸಾಲಿಗ್ರಾಮ ಚೇಂಪಿಯ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನದ ಬಳಿ ವಿರುದ್ಧ ದಿಕ್ಕಿನಿಂದ ಬಂದ ಸ್ಕೂಟಿ ಢಿಕ್ಕಿ ಹೊಡೆದಿದ್ದು, ಸವಾರ ಅನಂತ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ಸ್ಥಳೀಯರು ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಫಲಕಾರಿಯಾಗಿಲ್ಲ. ಮೃತರು ಅವಿವಾಹಿತರಾಗಿದ್ದು, ಅಡುಗೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಸ್ಕೂಟಿಯ ಸಹ ಸವಾರರಾಗಿದ್ದ ವಿಶ್ವನಾಥ ಅವರಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಅಪಘಾತ ತಪ್ಪಿಸಲು ರಿಕ್ಷಾವನ್ನು ಬಲಕ್ಕೆ ತಿರುಗಿಸಿದ್ದು ರಿಕ್ಷಾವು ಡಿವೈಡರ್ ಏರಿ ಪಲ್ಟಿಯಾಗಿದ್ದು, ರಿಕ್ಷಾ ಚಾಲಕನಿಗೆ ಸಣ್ಣ ಗಾಯಗಳಾಗಿದೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version