Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಬ್ರಾಹ್ಮಿಗೆ ರಾಜ್ಯ ಯುವಜನೋತ್ಸವದಲ್ಲಿ ಪ್ರಶಸ್ತಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ರಾಜ್ಯ ಎನ್.ಎಸ್.ಎಸ್. ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನಾಗಾವಿ ಗದಗದಲ್ಲಿ ಇತ್ತೀಚಿಗೆ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಕುಂದಾಪುರದ ಡಾI ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕಿ ಬ್ರಾಹ್ಮಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿದ್ದಾರೆ.     

ಯುವಜನೋತ್ಸವದಲ್ಲಿ ನಡೆದ ವೈಯಕ್ತಿಕ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ, ಗುಂಪು ನೃತ್ಯ ಸ್ಪರ್ಧೆಯಲ್ಲಿ ಪ್ರಥಮ, ಮೆರವಣಿಗೆಯಲ್ಲಿ ಪ್ರಥಮ ಹಾಗೂ ಸಮೂಹಗಾನ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಜೊತೆಗೆ ಮಂಗಳೂರು ವಿಶ್ವವಿದ್ಯಾನಿಲಯ ತಂಡ ಸಮಗ್ರ ಪ್ರಶಸ್ತಿ ಪಡೆದಿದೆ. 

ಬ್ರಾಹ್ಮಿ ಬಳ್ಕೂರಿನ ರಜನಿ ಅಶೋಕ್ ಹಾಗೂ ಅಂಪಾರಿನ ಅಶೋಕ್ ಕೆ. ದಂಪತಿಗಳ ಪುತ್ರಿ. ಅವರಿಗೆ ಸಂಸ್ಥೆಯ ಅಧ್ಯಕ್ಷರಾದ ಬಿ. ಎಂ. ಸುಕುಮಾರ ಶೆಟ್ಟಿ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ, ಮಂಗಳೂರು ವಿ.ವಿ. ಎನ್.ಎಸ್.ಎಸ್. ಸಂಯೋಜನಾಧಿಕಾರಿಗಳಾದ ಡಾ. ಶೇಷಪ್ಪ ಕೆ. ಹಾಗೂ ಕಾಲೇಜಿನ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಡಾ. ಚೇತನ್ ಶೆಟ್ಟಿ ಕೋವಾಡಿ, ದೀಪಾ ಪೂಜಾರಿ ಹಾಗೂ ಬೋಧಕ – ಬೋಧಕೇತರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version