Kundapra.com ಕುಂದಾಪ್ರ ಡಾಟ್ ಕಾಂ

ಗುಜ್ಜಾಡಿಯ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ

oplus_2

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಲಯನ್ಸ್ ಕ್ಲಬ್ ಹಕ್ಲಾಡಿ ಚನ್ನಕೇಶವ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ, ಗ್ರಾಮ ಪಂಚಾಯತ್ ಗುಜ್ಜಾಡಿ ಮತ್ತು ಹಳೆ ವಿದ್ಯಾರ್ಥಿ ಸಂಘ ಗುಜ್ಜಾಡಿ ಇವರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆಯಿತು.

ಶಾಲೆಯ ಎಸ್‌ಡಿಎಂಸಿ ಸದಸ್ಯೆ ಗಾಯತ್ರಿ ಕೊಡಂಚ ಶಿಬಿರ ಉದ್ಘಾಟಿಸಿದರು. ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.

ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆಯ ವೈದ್ಯೆ ಡಾ. ತನ್ವಿ ರೈ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ಕಾರ್ಯದರ್ಶಿ ರಾಘವೇಂದ್ರ ಡಿ., ಗೌರವಾಧ್ಯಕ್ಷ ಎ.ಆರ್. ವಲಿವುಲ್ಲಾ, ಶಾಲೆಯ ಮುಖ್ಯೋಪಾಧ್ಯಾಯ ಗಂಗಾಧರ ಬಂಟ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಹುಲಿಯಪ್ಪ ಗೌಡ, ಲಯನ್ಸ್ ಕ್ಲಬ್ ಸದಸ್ಯ ರಾಜು ಪೂಜಾರಿ, ಲಯನ್ಸ್ ಕಾರ್ಯದರ್ಶಿ ಶಾಂತಾರಾಮ ಶೆಟ್ಟಿ, ಖಜಾಂಚಿ ನವೀನ್ ಕುಮಾರ್ ಶೆಟ್ಟಿ, ಎಸ್‌ಡಿಎಂಸಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಲಯನ್ಸ್ ಕ್ಲಬ್ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

ಲಯನ್ಸ್ ಕ್ಲಬ್ ಹಕ್ಲಾಡಿ ಚನ್ನಕೇಶವ ಅಧ್ಯಕ್ಷ ಡಾ. ಕಿಶೋರ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಸಂಜೀವ ಬಿಲ್ಲವ ಕಾರ್ಯಕ್ರಮ ನಿರ್ವಹಿಸಿದರು.

Exit mobile version