Site icon Kundapra.com ಕುಂದಾಪ್ರ ಡಾಟ್ ಕಾಂ

ಯುವ ಬಂಟರ ಸಂಘದಿಂದ ಔದ್ಯಮಿಕ ಕ್ಷೇತ್ರದ ಸಾಧಕ ಎಸ್.ಎಸ್. ಹೆಗ್ಡೆ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಬೆಂಗಳೂರಿನ ಪ್ರತಿಷ್ಟಿತ ಸೌತ್ ಫೀಲ್ಡ್ ಕೋಟಿಂಗ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ತನ್ನ ಅತ್ಯುತ್ತಮ ಔದ್ಯಮಿಕ ನಿರ್ವಹಣೆಗಾಗಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿಗೆ ಭಾಜನರಾದ ನೆಲೆಯಲ್ಲಿ ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕ ಸರ್ಕಾರದ ಗೌರವಾನ್ವಿತ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿ, ಕುಂದಾಪುರಕ್ಕೆ ಆಗಮಿಸಿ, ತಾಲೂಕು ಯುವ ಬಂಟರ ಸಂಘದ ಮಹಾ ನಿರ್ದೇಶಕರು ಬಂಟ ಸಮುದಾಯದ ಮಹಾ ದಾನಿಗಳು ಆದ ಎಸ್.ಎಸ್. ಹೆಗ್ಡೆ ಅವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಅವರ  ಸ್ವಗ್ರಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷರಾದ  ವತ್ಸಲಾ ದಯಾನಂದ ಶೆಟ್ಟಿ ಅವರು ಸನ್ಮಾನಿಸಿದರು. ಸಂಘದ ಸ್ಥಾಪಕಾಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರು ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಎಸ್ ಎಸ್. ಹೆಗ್ಡೆ ಅವರು ನಮ್ಮ ಸಮಾಜದ ಬಹುದೊಡ್ಡ ಆಸ್ತಿ ಎಂದರು.

ಈ ಸಂದರ್ಭದಲ್ಲಿ  ವಸಂತಿ ಮಂಜಯ್ಯ ಶೆಟ್ಟಿ, ಸಂಘದ ಪ್ರಧಾನ ಕಾರ್ಯದರ್ಶಿ ಮುರಳಿಧರ ಶೆಟ್ಟಿ ಹುಯ್ಯಾರು, ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು, ಸುಕುಮಾರ್ ಶೆಟ್ಟಿ ಹೇರಿಕುದ್ರು, ರಾಜೇಶ್ ಶೆಟ್ಟಿ ವಕ್ವಾಡಿ, ಸತೀಶ್ ಶೆಟ್ಟಿ ಹೆಸ್ಕತ್ತೂರು ಮುಂತಾದವರು ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷರಾದ  ಡಾ. ಚೇತನ್ ಕುಮಾರ್ ಶೆಟ್ಟಿ ಕೋವಾಡಿ ಅಭಿನಂದನಾ ಮಾತುಗಳನ್ನಾಡಿದರು. ದಶಮ ಸಂಭ್ರಮದ ಕೋಶಾಧಿಕಾರಿ ಅಕ್ಷಯ್ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Exit mobile version