Site icon Kundapra.com ಕುಂದಾಪ್ರ ಡಾಟ್ ಕಾಂ

ಮದರ್ ತೆರೇಸಾಸ್ ಪಿಯು ಕಾಲೇಜಿನ ಉಪಪ್ರಾಂಶುಪಾಲರಾಗಿ ಅನುಭವಿ ಭೌತಶಾಸ್ತ್ರ ಉಪನ್ಯಾಸಕ ಎಕ್ಸ್ಪರ್ಟ್ ಜೈಸನ್ ಲುವಿಸ್ ನೇಮಕ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಶಂಕರನಾರಾಯಣ:
ಕುಂದಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮದರ್ ತೆರೇಸಾ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್, ಕುಂದಾಪುರ ಪ್ರವರ್ತಿತ ಮದರ್ ತೆರೇಸಾಸ್ ಪದವೀಪೂರ್ವ ಕಾಲೇಜಿಗೆ ಜಿಲ್ಲೆಯ ವಿವಿಧ ಕಾಲೇಜಿನಲ್ಲಿ ಭೌತಶಾಸ್ತ್ರ ಉಪನ್ಯಾಸಕರಾಗಿ 26 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಬ್ರಹ್ಮಾವರದ ಶ್ರೀ ಜೈಸನ್ ಲುವಿಸ್ ಅವರು ಉಪಪ್ರಾಂಶುಪಾಲರಾಗಿ ನೇಮಕಗೊಂಡಿರುತ್ತಾರೆ.

ವಿಜ್ಞಾನ ವಿಭಾಗದಲ್ಲಿ ಅಭ್ಯಸಿಸುವ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡಿ, ಸಿ ಇ ಟಿ /ಜೆ ಇ ಇ ಮೈನ್ಸ್ / ನೀಟ್ /ಐ ಐ ಟಿ ಯಲ್ಲಿ ಅತ್ತ್ಯುತ್ತಮ ಫಲಿತಾಂಶ ಪಡೆಯುವ ಉದ್ದೇಶದಿಂದ ಉಪಪ್ರಾಂಶುಪಾಲರನ್ನು ನೇಮಿಸಲಾಗಿದೆ.

ಉಪಾಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಜೈಸನ್ ಲುವಿಸ್ ಸಂಸ್ಥೆಯ ಉತ್ತರೋತ್ತರ ಅಭಿವೃದ್ಧಿಗೆ ಹಾಗೂ ವಿದ್ಯಾರ್ಥಿಗಳ ಗುಣಮಟ್ಟದ ಫಲಿತಾಂಶಕ್ಕೆ ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸುವುದಾಗಿ ಹೇಳಿದರು.

Exit mobile version