Site icon Kundapra.com ಕುಂದಾಪ್ರ ಡಾಟ್ ಕಾಂ

ಮೂಡ್ಲಕಟ್ಟೆ ಕಾಲೇಜಿನಲ್ಲಿ ರಕ್ತದಾನ ಶಿಬಿರ ಸಂಪನ್ನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ರಕ್ತದಾನವು ಜೀವಗಳನ್ನು ಉಳಿಸುವ ಒಂದು ಉದಾತ್ತ ಕಾರ್ಯವಾಗಿದೆ ಮತ್ತು ಸಮುದಾಯದ ಜವಾಬ್ದಾರಿಯ ಪ್ರಜ್ಞೆಯನ್ನು ಹೆಚ್ಚಿಸುತ್ತದೆ ಎಂದು ಲಯನ್ಸ್ ಕ್ಲಬ್ ವಲಯ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಹೇಳಿದರು.

ಎಮ್‌ಐಟಿ ಕುಂದಾಪುರದ ಎನ್‌ಎಸ್‌ಎಸ್‌ ಘಟಕವು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಮತ್ತು ಲಯನ್ಸ್ ಕ್ಲಬ್ ಹಂಗಳೂರು ಸಹಯೋಗದೊಂದಿಗೆ ಇತ್ತೀಚೆಗೆ ನಡೆದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

ಭಾರತೀಯ ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ಜಯಕರ್‌ ಶೆಟ್ಟಿ ಮಾತನಾಡಿ, ನಿಯಮಿತ ರಕ್ತದಾನದ ಅಗತ್ಯತೆ ಮತ್ತು ಜೀವಗಳನ್ನು ಉಳಿಸುವಲ್ಲಿ ಅದರ ಪಾತ್ರದ ಬಗ್ಗೆ ತಿಳಿಸಿದರು.

ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಮೆಲ್ವಿನ್ ಡಿಸೋಜ ಅಧ್ಯಕ್ಷೀಯ ಭಾಷಣ ಮಾಡಿ, ವಿದ್ಯಾರ್ಥಿಗಳನ್ನು ಸಕ್ರಿಯವಾಗಿ ಭಾಗವಹಿಸಲು ಪ್ರೇರೇಪಿಸಿದರು ಮತ್ತು ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಸೇವೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್, ಕಾರ್ಯದರ್ಶಿ ರೋಹನ್ ಡಿ. ಕೋಸ್ಟಾ, ಕಾರ್ಯದರ್ಶಿ ಮ್ಯಾಥ್ಯೂ ಡಿಸೋಜ, ಕಾರ್ಯದರ್ಶಿ ಶಿವರಾಮ್ ಶೆಟ್ಟಿ ಮತ್ತು ಖಜಾಂಚಿ ಪುರಾಣಿಕ್, ಸಿಬ್ಬಂದಿ ವರ್ಗ ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

ಎನ್‌ಎಸ್‌ಎಸ್ ಸಂಯೋಜಕ ಡಾ. ಸರವಣನ್ ಸ್ವಾಗತಿಸಿ, ವಂದಿಸಿದರು. ವಿದ್ಯಾರ್ಥಿನಿ ಎಮ್. ಸಿ. ವರ್ಷ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಎನ್‌ಎಸ್‌ಎಸ್‌ ಸ್ವಯಂಸೇವಕರ ಸಹಾಯದಿಂದ ಐಆರ್‌ಸಿಎಸ್‌ನ ವೈದ್ಯಕೀಯ ತಂಡವು ವ್ಯವಸ್ಥಿತವಾಗಿ ರಕ್ತದಾನ ಪ್ರಕ್ರಿಯೆ ನಡೆಸಿಕೊಟ್ಟರು. ನೂರಕ್ಕೂ ಅಧಿಕ ದಾನಿಗಳು ರಕ್ತದಾನ ಮಾಡಿದರು.

Exit mobile version