ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಸ್ತೆ ಸುರಕ್ಷತೆ ಮತ್ತು ಸಂಚಾರಿ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ. ನಿಯಮಗಳನ್ನು ಸರಿಯಾಗಿ ಅರಿತುಕೊಂಡರೆ ಅಪಘಾತಗಳಾಗುವುದನ್ನು ದೊಡ್ಡ ಪ್ರಮಾಣದಲ್ಲಿ ತಡೆಯಬಹುದು. ವಿದ್ಯಾರ್ಥಿಗಳು ಹೆಲ್ಮೆಟ್ ಧರಿಸುವುದು, ಚಾಲನೆ ಪರವಾನಿಗೆ ಪತ್ರ ಇಟ್ಟುಕೊಳ್ಳುವುದು ಸೇರಿದಂತೆ ಸಂಚಾರಿ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು ಎಂದು ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ನರೇಶ್ ಹೇಳಿದರು.
ಅವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಆಯೋಜಿಸಿದ ಸಂಚಾರಿ ನಿಯಮಗಳ ಕುರಿತ ‘ಟ್ರಾಫಿಕ್ ಅರಿವು’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಇದೇ ಸಂದರ್ಭ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ರವಿಚಂದ್ರ ಸಂಚಾರಿ ನಿಯಮಗಳ ಕುರಿತು ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಚಾರಿ ನಿಯಮಗಳನ್ನು ವಿದ್ಯಾರ್ಥಿಗಳು ಉಲ್ಲಂಘಿಸದೆ, ಪ್ರಾಮಾಣಿಕವಾಗಿ ಅದನ್ನು ಪಾಲಿಸಬೇಕು. ಹೆತ್ತವರ ಕನಸುಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹೆಜ್ಜೆ ಹಾಕಬೇಕು ಎಂದರು.
ಕಾಲೇಜಿನ ಉಪ-ಪ್ರಾಂಶುಪಾಲ ಹಾಗೂ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ಎನ್ಎಸ್ಎಸ್ ಘಟಕ ಎರಡರ ಕಾರ್ಯಕ್ರಮ ಅಧಿಕಾರಿ ದೀಪಾ ಪೂಜಾರಿ ವಂದಿಸಿದರು. ಎನ್ಎಸ್ಎಸ್ ಸ್ವಯಂಸೇವಕಿ ರಶ್ಮಿತಾ ಕಾರ್ಯಕ್ರಮ ನಿರೂಪಿಸಿ, ಅಭಿಷೇಕ್ ಪ್ರಾರ್ಥಿಸಿದರು.

