Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ.ಬಿ. ಹೆಗ್ಡೆ ಕಾಲೇಜು: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ – ಉಪನ್ಯಾಸ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರವು ಅನೇಕ ಸಂಶೋಧನಾ ನಿರತ ವಿದ್ಯಾರ್ಥಿಗಳಿಗೆ ಸಹಕರಿಸುವುದರೊಂದಿಗೆ, ಕನ್ನಡ ಸಾರಸ್ವತ ಲೋಕಕ್ಕೆ ರಾಷ್ಟ್ರಕವಿ ಗೋವಿಂದ ಪೈ ಅವರ ಸಾಹಿತ್ಯ ಕೃತಿಗಳು ಅಪಾರ ಕೊಡುಗೆ ನೀಡಿವೆ ಎಂದು ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ| ಬಿ. ಜಗದೀಶ್ ಶೆಟ್ಟಿ ಹೇಳಿದರು.

ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯಕ್ಷಗಾನ ಸಂಘವು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಹಮ್ಮಿಕೊಂಡ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಸಂದರ್ಭ ಕನ್ನಡ ಕರಾವಳಿ ಭಾಗದ ಸಾಂಸ್ಕೃತಿಕ ಕಿರುಚಿತ್ರ ಪ್ರದರ್ಶಿಸಲಾಯಿತು. ಸಂಶೋಧನ ಕೇಂದ್ರದ ಡಾ. ಅರುಣ್ ಕುಮಾರ್, ಕಾಲೇಜಿನ ಆಡಳಿತ ನಿಕಾಯಕರು ಮತ್ತು ಯಕ್ಷಗಾನ ಸಂಘದ ಸಂಯೋಜಕರಾದ ರಕ್ಷಿತ್ ರಾವ್ ಗುಜ್ಜಾಡಿ, ಸುಹಾಸ್ ಜಟ್ಟಿಮನೆ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

Exit mobile version