Site icon Kundapra.com ಕುಂದಾಪ್ರ ಡಾಟ್ ಕಾಂ

ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಗಣೇಶ ಮೊಗವೀರ ಅವರಿಗೆ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಸ್ಪೇಸ್ ಮೀಡಿಯಾ ಡಿಸಿಎಕ್ಸ್‌ ಸಿಸ್ಟಮ್ಸ್ ಲಿಮಿಟೆಡ್ ಅರ್ಷಿಸುವ, ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ ಮೂಲ ಮಹಾಸಂಸ್ದಾನ‌ ಶ್ರೀ ರಾಘವೇಂದ್ರ ಸ್ವಾಮೀಜಿಗಳ ಮಂತ್ರಾಲಯ, ಪರಮಪೂಜ್ಯ  ಶ್ರೀ 1008  ಶ್ರೀ ಮತ್ಸುಬುಧೇಂದ್ರ ತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಕೊಡ ಮಾಡುವ ಪ್ರತಿಷ್ಠಿತ  ಶ್ರೀ ಮಂತ್ರಾಲಯ ಪರಿಮಳ‌ ಪ್ರಶಸ್ತಿ 2025ನ್ನು ಪ್ರಶಸ್ತಿಗೆ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಹಾಗೂ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ಕ್‌ನ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಗಣೇಶ‌ ಮೊಗವೀರ ಅವರನ್ನು ಆಯ್ಕೆ ಮಾಡಲಾಗಿತ್ತು.

ಅವರು ಶಿಕ್ಷಣ ಕ್ಷೇತ್ರದಲ್ಲಿ ಇದುವರೆಗೆ ಸಲ್ಲಿಸಿದ ಸೇವೆ ಹಾಗೂ ಕೊಡುಗೆಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದರು. ಇತ್ತೀಚಿಗೆ ಮಂತ್ರಾಲಯದಲ್ಲಿ ನಡೆದ ವೈಭವದ ಸಮಾರಂಭದಲ್ಲಿ ಮಂತ್ರಾಲಯ ಸ್ವಾಮೀಜಿ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

Exit mobile version