Site icon Kundapra.com ಕುಂದಾಪ್ರ ಡಾಟ್ ಕಾಂ

ಬಿ.ಕಾಂ. ಮತ್ತು ಬಿ.ಸಿ.ಎ. ಪದವಿಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜಿಗೆ 2 ರ‍್ಯಾಂಕ್‌

ಕುಂದಾಪ್ರ ಡಾಟ್‌ ಕಾಂ ಸುದ್ದಿ.      
ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ. ಮತ್ತು ಬಿ.ಸಿ.ಎ. ಪದವಿಯಲ್ಲಿ ಎರಡು ವಿದ್ಯಾರ್ಥಿಗಳು ರ‍್ಯಾಂಕ್‌ ಗಳಿಸಿದ್ದಾರೆ. 

ಮೊಳಹಳ್ಳಿಯ ನಾಗೇಶ್ವರ ಉಡುಪ ಹಾಗೂ ಸವಿತಾ ಎನ್. ಉಡುಪ ದಂಪತಿಗಳ ಪುತ್ರಿ ರಶ್ಮಿ ಉಡುಪ ಬಿ.ಕಾಂ. ಪದವಿಯಲ್ಲಿ 6ನೇ ರ‍್ಯಾಂಕ್‌, ಯಡಮೊಗೆಯ ಪುರುಷೋತ್ತಮ ಕನ್ನಂತ ಹಾಗೂ ನಾಗರತ್ನ ದಂಪತಿಗಳ ಪುತ್ರಿ ಕೀರ್ತನಾ ಬಿ.ಸಿ.ಎ. ಪದವಿಯಲ್ಲಿ 5ನೇ ರ‍್ಯಾಂಕ್‌ಗಳಿಸಿದ್ದಾರೆ. 

ಅವರಿಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ್ ಶೆಟ್ಟಿ, ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version