Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ: ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಗಣಪತಿ ಪೂಜೆ, ಧ್ವಜಾರೋಹಣದೊಂದಿಗೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಾ.15 ರಿಂದ 24 ರವರೆಗೆ ನಡೆಯಲಿರುವ ಶ್ರೀ ಮೂಕಾಂಬಿಕಾ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಶನಿವಾರ ಬೆಳಿಗ್ಗೆ ದೇವಳದ ಪ್ರಧಾನ ಅರ್ಚಕ ಹಾಗೂ ತಂತ್ರಿ ಡಾ. ಕೆ. ನಿತ್ಯಾನಂದ ಅಡಿಗ ನೇತೃತ್ವದಲ್ಲಿ ಗಣಪತಿ ಪ್ರಾರ್ಥನೆ, ನಾಂದಿ ಪುಣ್ಯಾಹ, ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು.

ಈ ಸಂದರ್ಭ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ದೇಗುಲದ ಸಮಿತಿ ಸದಸ್ಯರಾದ ಧನಾಕ್ಷಿ, ಸುರೇಂದ್ರ ಶೆಟ್ಟಿ, ಯು. ರಾಜೇಶ್ ಕಾರಂತ್, ಮಹಾಲಿಂಗ ನಾಯ್ಕ್, ಸುಧಾ ಕೆ., ಅಭಿಲಾಷ್ ಪಿ.ವಿ., ರಘುರಾಮ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

ಮಾರ್ಚ್ 15ರಿಂದ ಮೊದಲ್ಗೊಂಡು ವಿವಿಧ ಧಾರ್ಮಿಕ ಕಾರ್ಯಕ್ರಮ ಮಾರ್ಚ್ 24ರ ತನಕ ಜರುಗಲಿದೆ. ಮಾರ್ಚ್ 22ರ ಬೆಳಿಗ್ಗೆ ರಥಾರೋಹಣ ಸಂಜೆ ಮನ್ಮಹಾರಥೋತ್ಸವ ಜರುಗಲಿದೆ.

Exit mobile version