Kundapra.com ಕುಂದಾಪ್ರ ಡಾಟ್ ಕಾಂ

ಕನ್ನಡ ನಾಟ್ಯ ರಂಗ ಹೈದರಾಬಾದ್ ವತಿಯಿಂದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಕನ್ನಡ ನಾಟ್ಯ ರಂಗ ರಿ. ಹೈದರಾಬಾದ್ ಇದರ ವತಿಯಿಂದ ಇತ್ತೀಚಿಗೆ ಹೈದರಾಬಾದ್‌ನ ಸುಂದರಯ್ಯ ಕಲಾಭವನದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಯುವ ಸಂಘಟಕ ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಕನ್ನಡ ನಾಟ್ಯ ರಂಗ ರಿ. ಇದರ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಸನ್ಮಾನಿಸಿ ಗೌರವಿಸಿದರು. ವೇದಿಕೆಯಲ್ಲಿ ಹೈದರಾಬಾದ್ ಬಂಟರ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ರತ್ನಾಕರ ರೈ, ಹೋಟೆಲ್ ಉದ್ಯಮಿಗಳಾದ ಅಲ್ತಾರು ದೇಬೆಟ್ಟು, ಜಯರಾಮ ಶೆಟ್ಟಿ, ಅಣ್ಣಪ್ಪ ಶೆಟ್ಟಿ ಮಲ್ಯಾಡಿ ಮತ್ತು ನಾಟ್ಯರಂಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version