Kundapra.com ಕುಂದಾಪ್ರ ಡಾಟ್ ಕಾಂ

ವಿಶ್ವ ವಿನಾಯಕ ಸಿಬಿಎಸ್‌ಇ ಸ್ಕೂಲ್: ಎಲೆಕ್ಟ್ರಾನಿಕ್‌ ವಿಜ್ಞಾನ ಮಾದರಿಗಳ ಪ್ರದರ್ಶನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ಕೋಡಿಂಗ್ ಮತ್ತು ರೊಬೊಟಿಕ್ಸ್ ತತ್ವದ ಆಧಾರದಲ್ಲಿ ತಯಾರಿಸಿದ ಎಲೆಕ್ಟ್ರಾನಿಕ್ ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ಏರ್ಪಡಿಸಲಾಯಿತು.

ಐದನೇ ತರಗತಿಯಿಂದ ಒಂಭತ್ತನೇ ತರಗತಿಯ ವಿದ್ಯಾರ್ಥಿಗಳು ಒಟ್ಟು 40 ವಿಜ್ಞಾನ ಮಾದರಿಗಳನ್ನು ತಯಾರಿಸಿ ಪ್ರದರ್ಶನ ಮಾಡಿದರು. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ವಿದ್ಯಾರ್ಥಿಗಳ ಸಂಶೋಧನಾ ಮನೋಭಾವವನ್ನು ಪ್ರಶಂಸಿಸಿದರು. ಶಿಕ್ಷಕ ಹಾಗೂ ಪೋಷಕರ ಸಹಕಾರದಿಂದ ವಿದ್ಯಾರ್ಥಿಗಳು ಸಾಧನೆಯನ್ನು ಮಾಡಬಹುದು ಎಂದು ತಿಳಿಸಿದರು.

ಶಾಲಾ ಪ್ರಾಂಶುಪಾಲ ನಿತಿನ್ ಡಿ’ಆಲ್ಮೇಡಾ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೋಡಿಂಗ್ ಹಾಗೂ ರೊಬೊಟಿಕ್ಸ್ ತಂತ್ರಜ್ಞಾನದ ಕಲಿಕೆ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.

ವಿಜ್ಞಾನ ಮಾದರಿ ಪ್ರದರ್ಶನವನ್ನು ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೆರೆದಿಡಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್ ಪ್ರಭಾಕರ ಶೆಟ್ಟಿ, ಶಾಲಾ ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡಾ, ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಟಿಂಕರ್ ಸ್ಪೇಸ್ ಸಂಸ್ಥೆಯ ತರಭೇತುದಾರರಾದ ಪ್ರಣಮ್ ಆಚಾರ್ಯ,  ಸಮರ್ಥ್, ಮತ್ತು ಗಿರೀಶ್ ಅವರ ಮಾರ್ಗದರ್ಶನದಲ್ಲಿ ವಿವಿಧ ವಿಜ್ಞಾನ ಮಾದರಿಗಳನ್ನು ತಯಾರಿಸಿ ಪ್ರದರ್ಶನ ಮಾಡಿದರು. 

Exit mobile version