ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಜಾನಪದ ಅಕಾಡೆಮಿಯ 2024ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಯಲ್ಲಿ ಬೀದರ್ ಜಿಲ್ಲೆಯ ಪೂಜ್ಯ ಶ್ರೀ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಸಂಗೀತ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಅವರಿಗೆ ಪ್ರದಾನ ಮಾಡಲಾಯಿತು.
ಡಾ. ಗಣೇಶ್ ಗಂಗೊಳ್ಳಿ ಅವರು ಕಳೆದ 32 ವರ್ಷದ ಜಾನಪದ ಸಂಗೀತ ಕ್ಷೇತ್ರದ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಗೊಲ್ಲಳ್ಳಿ ಶಿವಪ್ರಕಾಶ್, ಅಕಾಡಮಿಯ ಸದಸ್ಯರು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಇದನ್ನೂ ಓದಿ – ಕರ್ನಾಟಕ ಜಾನಪದ ಅಕಾಡೆಮಿಯ ವಾರ್ಷಿಕ ಗೌರವ ಪ್ರಶಸ್ತಿಗೆ ಎನ್. ಗಣೇಶ್ ಗಂಗೊಳ್ಳಿ ಆಯ್ಕೆ – https://kundapraa.com/?p=83002