Kundapra.com ಕುಂದಾಪ್ರ ಡಾಟ್ ಕಾಂ

ಹೈದರಾಬಾದ್ ಬಂಟರ ಸಂಘದಿಂದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಬಂಟರ ಸಂಘ ರಿ. ಹೈದರಾಬಾದ್ ವತಿಯಿಂದ ಸಂಘದ ಆಡಳಿತ ಕಚೇರಿಯಲ್ಲಿ ಯುವ ಸಂಘಟಕ, ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಿದರು.

ಹೈದರಾಬಾದ್ ಬಂಟರ ಸಂಘದ ಅಧ್ಯಕ್ಷರಾದ ಶಂಕರ ಶೆಟ್ಟಿ ಅವರು ಸನ್ಮಾನಿಸಿದರು. ಈ ಸಂದರ್ಭ ಹೈದರಾಬಾದ್ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ರತ್ನಾಕರ ರೈ, ಕೋಶಾಧಿಕಾರಿ ರವಿರಾಜ್ ಶೆಟ್ಟಿ, ಹೋಟೆಲ್ ಉದ್ಯಮಿಗಳಾದ ಅಲ್ತಾರು ದೇಬೆಟ್ಟು ಜಯರಾಮ ಶೆಟ್ಟಿ, ಅಣ್ಣಪ್ಪ ಶೆಟ್ಟಿ ಮಲ್ಯಾಡಿ, ಉದಯ್ ಕುಮಾರ್ ಶೆಟ್ಟಿ ಹಕ್ಲಾಡಿ ಉಪಸ್ಥಿತರಿದ್ದರು.

Exit mobile version