Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರಿನ 20 ಹೆಕ್ಟೆರ್ ಪ್ರದೇಶದಲ್ಲಿ ತೆಂಗು ಬೆಳೆಗೆ ಕಪ್ಪು ಹುಳದ ಬಾಧೆ, ಕ್ರಮ ಕೈಗೊಳ್ಳುವಂತೆ ಗಂಟಿಹೊಳೆ ಆಗ್ರಹ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ರಾಜ್ಯದಲ್ಲಿ ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೆಂಗು ಬೆಳೆಗೆ ಕಪ್ಪು ಹುಳ ಬಾಧೆ ರೋಗ ತಗುಲಿದ್ದು, ತೆಂಗು ಬೆಳೆಗಾರರಿಗೆ ಪರಿಹಾರ ನೀಡಿಕೆ, ರೋಗ ನಿವಾರಣಾ ಕ್ರಮಗಳು ಹಾಗೂ ತೆಂಗು ಬೆಳೆಗಾರರ ಕುಂದು ಕೊರತೆ ಹಾಗೂ ಅವರ ಶ್ರೇಯೋಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡ ಕ್ರಮಗಳ ಕುರಿತಾಗಿ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಸರ್ಕಾರವನ್ನು ಪ್ರಶ್ನೆ ಮಾಡಿದರು.

ಶಾಸಕರ ಪ್ರಶ್ನೆಗೆ ಉತ್ತರಿಸಿದ ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ, ರಾಜ್ಯದಲ್ಲಿ 41,368 ಹೆಕ್ಟೆರ್ ಪ್ರದೇಶದಲ್ಲಿ ತೆಂಗು ಬೆಳೆಗೆ ಕಪ್ಪು ಹುಳದ ಬಾಧೆ ಕಂಡು ಬಂದಿದ್ದು, ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮೂವತ್ತು ಮುಡಿ ಮತ್ತು ಕನ್ನಡ ಕುದ್ರು ಗ್ರಾಮಗಳಲ್ಲಿ 20 ಹೆಕ್ಟೆರ್ ಪ್ರದೇಶದಲ್ಲಿ ತೆಂಗು ಬೆಳೆಗೆ ಕಪ್ಪು ಹುಳುವಿನ ಬಾಧೆ ರೋಗ ಪ್ರಕರಣ ಗಳು ಕಂಡು ಬಂದಿರುತ್ತದೆ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿದ ಶಾಸಕರು, ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು, ಕಲ್ಪವೃಕ್ಷ ಬೆಳೆಯಲ್ಲಿ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

Exit mobile version