Site icon Kundapra.com ಕುಂದಾಪ್ರ ಡಾಟ್ ಕಾಂ

ಕೋಟ: ಪಡಿತರ ಅಕ್ಕಿ ಅಕ್ರಮ ಸಾಗಾಟ, ವಾಹನ ಚಾಲಕ ವಶಕ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಪಡಿತರ ಅಕ್ಕಿಯನ್ನು ಅಕ್ರಮವಾಗಿ ಪಡೆದು ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಘಟನೆ ಕೋಟ ಗಿಳಿಯಾರಿನಲ್ಲಿ ಸೋಮವಾರ ಸಂಭವಿಸಿದೆ.

ಉಡುಪಿಯ ಆಹಾರ ನಿರೀಕ್ಷಕ ಸುಧೀರ್ ಹಾಗೂ ಕೋಟ ಪೊಲೀಸ್‌ ಠಾಣಾ ಉಪನಿರೀಕ್ಷಕರಾದ ರಾಘವೇಂದ್ರ ಸಿ. ಜಂಟಿ ಕಾರ್ಯಚರಣೆ ನಡೆಸಿ ಬೋಲೆರೋ ವಾಹನವನ್ನು ವಶಕ್ಕೆ ಪಡೆದಿದ್ದು 42 ಪ್ಲಾಸ್ಟಿಕ್‌ ಚೀಲಗಳಲ್ಲಿ ಅಕ್ಕಿಯನ್ನು ಯಾವುದೇ ಪರವಾನಿಗೆ, ದಾಖಲಾತಿಗಳಿಲ್ಲದೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದುದು ಕಂಡುಬಂದಿದೆ.

ಬೋಲೆರೋ ಚಾಲಕ ಉದಯ ಹಾಗೂ ಅಕ್ಕಿಯನ್ನು ಅಕ್ರಮವಾಗಿ ಖರೀದಿಸುತ್ತಿದ್ದ ಸುರೇಂದ್ರ ಅವರ ಮೇಲೆ ಪ್ರಕರಣ ದಾಖಲಾಗಿದೆ.

Exit mobile version