Site icon Kundapra.com ಕುಂದಾಪ್ರ ಡಾಟ್ ಕಾಂ

ಲೈಟ್ ಫಿಶಿಂಗ್ ನಡೆಸುತ್ತಿದ್ದ 3 ಬೋಟುಗಳಿಗೆ ದಂಡ

ಕುಂದಾಪ್ರ ಡಾಟ್ ಕಾಂ‌ ಸುದ್ದಿ.
ಗಂಗೊಳ್ಳಿ:
ಸಮುದ್ರದಲ್ಲಿ ಅವೈಜ್ಞಾನಿಕವಾಗಿ ಬೆಳಕು ಮೀನುಗಾರಿಕೆ ನಡೆಸುತ್ತಿದ್ದ 3 ಬೋಟುಗಳಿಗೆ ದಂಡ ವಿಧಿಸಿ ಉಡುಪಿ ಜಿಲ್ಲಾ ಮೀನುಗಾರಿಕೆ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಕಾರ್ಯಾಚರಣೆ ನಡೆಸಿದ್ದು 3 ಬೋಟುಗಳ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಉಡುಪಿ ಜಿಲ್ಲಾ ಮೀನುಗಾರಿಕೆ ಜಂಟಿ ನಿರ್ದೇಶಕರಿಗೆ ತಿಳಿಸಲಾಗಿತ್ತು. ವಿಚಾರಣೆ ನಡೆಸಿದ ಅವರು ಬೋಟುಗಳ ಮಾಲಕರಿಗೆ ಒಟ್ಟು 16 ಸಾವಿರ ರೂ. ದಂಡ ವಿಧಿಸಿದ್ದಾರೆ.

ಮತ್ತೊಂದು ಬೋಟ್‌ನಲ್ಲಿ ಬೆಳಕು ಮೀನುಗಾರಿಕೆ ನಡೆಸಲು ಜನರೇಟರ್‌ ಅಳವಡಿಸಿರುವುದು ಪರಿಶೀಲನೆಯಲ್ಲಿ ಕಂಡುಬಂದಿದೆ. ಅವರಿಗೂ 5 ಸಾವಿರ ರೂ. ದಂಡ ವಿಧಿಸಲಾಗಿದೆ. ಬೋಟ್ ಅನ್ನು ಬಿಡುಗಡೆಗೊಳಿಸುವ ಮುನ್ನ ಬೋಟುಗಳಲ್ಲಿ ಅಳವಡಿಸಿದ ಜನರೇಟರ್ ಹಾಗೂ ಬೆಳಕು ಮೀನುಗಾರಿಕೆಗೆ ಸಂಬಂಧಿಸಿದ ಲೈಟಿಂಗ್ ಉಪಕರಣಗಳನ್ನು ತೆರವುಗೊಳಿಸಲಾಗಿದೆ.

ನಿಷೇಧಿತ ಬೆಳಕು ಮೀನುಗಾರಿಕೆ ಮತ್ತು ಬುಲ್ ಟ್ರಾಲ್‌ಗಳನ್ನು ತಡೆಯಲು ಮೀನುಗಾರಿಕಾ ಇಲಾಖೆ ಹಾಗೂ ಕರಾವಳಿ ಕಾವಲು ಪೊಲೀಸ್ ವತಿಯಿಂದ ಜಂಟಿಯಾಗಿ ಫೈಯಿಂಗ್ ಸ್ಕ್ಯಾಡ್ ರಚಿಸಲಾಗಿದೆ. ಈ ತಂಡವು ಮಲ್ಪೆ ಹಾಗೂ ಗಂಗೊಳ್ಳಿ ಬಂದರಿನಲ್ಲಿ ನಿರಂತರ ತಪಾಸಣೆ ನಡೆಸುತ್ತಿದೆ.

Exit mobile version