Site icon Kundapra.com ಕುಂದಾಪ್ರ ಡಾಟ್ ಕಾಂ

ಮರಳು, ಮಣ್ಣು ಸಾಗಾಟ ಮಾಡುವ ವಾಹನಗಳ ಚಾಲಕರು/ ಮಾಲೀಕರಿಗೆ ಸೂಚನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಮಾ.19:
ಜಿಲ್ಲೆಯಲ್ಲಿ ಮರಳು ಮತ್ತು ಮಣ್ಣು ಸಾಗಾಟ ಮಾಡುವ ವಾಹನಗಳು ಕಡ್ಡಾಯವಾಗಿ ಟರ್ಪಾಲ್‌ನಿಂದ ಮುಚ್ಚಿ ಸಾಗಾಟ ಮಾಡುವಂತೆ ಸಂಬಂಧಪಟ್ಟ ಎಲ್ಲಾ ವಾಹನ ಚಾಲಕರು ಹಾಗೂ ಮಾಲೀಕರು ಕ್ರಮವಹಿಸಬೇಕು. ತಪ್ಪಿದ್ದಲ್ಲಿ ದಂಡ ವಿಧಿಸಿ ಅಂತಹ ವಾಹನಗಳ ಪರವಾನಿಗೆಯನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಜಿಲ್ಲೆಯಲ್ಲಿ ಮರಳು ಮತ್ತು ಮಣ್ಣು ಸಾಗಾಟ ಮಾಡುವ ವಾಹನಗಳು ಟರ್ಪಾಲ್‌ನಿಂದ ಮುಚ್ಚದೇ ಸಾಗಾಟ ಮಾಡುತ್ತಿರುವುದರಿಂದ ಇತರ ವಾಹನ ಚಾಲಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಸಾಕಷ್ಟು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ವಹಿಸಲಾಗಿದೆ.

Exit mobile version