Site icon Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ವೆಂಕಟರಮಣ ಪ.ಪೂ ಕಾಲೇಜು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ  ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ  ವಿದ್ಯಾರ್ಥಿಗಳಿಗೆ  ಉತ್ಕರ್ಷ ಎನ್ನುವ ಶೀರ್ಷಿಕೆ ಅಡಿಯಲ್ಲಿ ಶುಭ ವಿದಾಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿಜಯ ಮಕ್ಕಳ ಕೂಟ ಆತ್ರಾಡಿ ಇಲ್ಲಿನ ಸಂಚಾಲಕರಾದ ಸುಭಾಸ್ ಚಂದ್ರ ಶೆಟ್ಟಿ ಅವರು ಮಾತನಾಡಿ, ಸರಳ ಬದುಕಿನೊಂದಿಗೆ ಮಾನವೀಯ ಮೌಲ್ಯ ಗಳನ್ನು ಅಳವಡಿಸಿ ಕೊಂಡು, ಸಮಾಜಮುಖಿ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತಾಗಲಿ ಎಂದು ಹಾರೈಸಿದರು.

ಅಧ್ಯಕ್ಷತೆಯನ್ನು  ವಹಿಸಿದ್ದ ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ ನ  ಕಾರ್ಯದರ್ಶಿ ಕೆ.  ರಾಧಾಕೃಷ್ಣ ಶೆಣೈ ಅವರು ಮಾತನಾಡಿ,  ತಂದೆ, ತಾಯಿ, ಗುರುಗಳಿಗೆ  ಗೌರವ ನೀಡಿ.  ಸತ್ಪಜೆಯಾಗಿ  ಯಶಸ್ವಿ  ಬದುಕನ್ನು ಸಾಗಿಸಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 

ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್,  ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ, ಹಿರಿಯ ರಾಸಾಯನ  ಶಾಸ್ತ್ರ ಉಪನ್ಯಾಸಕರಾದ ರಮಾಕಾಂತ್ ರೇವಣ್ ಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ  ಕಾರ್ಯಕ್ರಮಗಳು ನೆರವೇರಿತು. ವಿದ್ಯಾರ್ಥಿನಿ  ಶ್ರೀನಿಧಿ ಶೆಟ್ಟಿ ನಿರೂಪಿಸಿ, ಅದಿತಿ  ಸ್ವಾಗತಿಸಿ,  ಆಯಿಷಾ ಹಾಗೂ ಅಸ್ಮಿಯಾ, ವಂದಿಸಿ, ಶೈನಿಶ್ ಅತಿಥಿಯನ್ನು ಪರಿಚಯಿಸಿದರು.

Exit mobile version