ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ ಕ್ರೀಡಾಪಟುಗಳಿಗೆ ಅಥವಾ ಯೋಗ ಸಂಸ್ಥೆಗಳಿಗೆ ಪ್ರಧಾನ ಮಂತ್ರಿಗಳು ರಾಷ್ಟ್ರ ಮಟ್ಟದ ಅಥವಾ ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಯೋಗ ಪ್ರಶಸ್ತಿಯನ್ನು ಘೋಷಿಸಿದ್ದು, ಅದರಂತೆ ಅತ್ಯುನ್ನತ ಯೋಗ ಪ್ರಶಸ್ತಿಗಾಗಿ ಯೋಗ ಪಟುಗಳು ಹಾಗೂ ಯೋಗ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು https://innovateindia.mygov.in/pm-yoga-awards-2025/ ವೆಬ್‌ಸೈಟ್ ನಲ್ಲಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ:0820-2521324, ಮೊ.ನಂ: 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

