ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ವತಿಯಿಂದ ಬಿ.ಇ/ಬಿ.ಟೆಕ್ ಪದವೀಧರರಾಗಿದ್ದು, ಐ.ಐ.ಎಸ್.ಸಿ, ಐ.ಐ.ಟಿ ಮತ್ತು ಎನ್.ಐ.ಟಿ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟಲಿಜೆನ್ಸಿ ಅಂಡ್ ಮೆಷಿನ್ ಲರ್ನಿಂಗ್ ವೃತ್ತಿಪರ ಕೋರ್ಸುಗಳಲ್ಲಿ (ತರಬೇತಿ ಅವಧಿ ಕನಿಷ್ಠ 6 ತಿಂಗಳಿನಿಂದ 1 ವರ್ಷ) ಭಾಗವಹಿಸುವ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15000 ರೂ. ಶಿಷ್ಯ ವೇತನ ಪಡೆಯಲು ಅವಕಾಶವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯ ಕುಟುಂಬ ಆದಾಯ 5 ಲಕ್ಷ ರೂ. ಮೀರಿರಬಾರದು. ಮೂಲ ನಿವಾಸಿ ಮತ್ತು ಅಲೆಮಾರಿ/ ಅರೆ ಅಲೆಮಾರಿ, ಸೂಕ್ಷ್ಮ/ ಅತಿ ಸೂಕ್ಷ್ಮ ಸಮುದಾಯಗಳ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.