ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ್ ಅವರು ಸೋಮವಾರ ಕೊಲ್ಲೂರು ದೇಗಲುಕ್ಕೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಕೊಲ್ಲೂರು ದೇವಿಯ ಪರಮ ಭಕ್ತರಾದ ಇಳಯರಾಜ್ ಅವರು ಸಾಮಾನ್ಯವಾಗಿ ಪ್ರತಿವರ್ಷವೂ ಕೊಲ್ಲೂರಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಸದಸ್ಯರಾದ ರಘುರಾಮ ದೇವಾಡಿಗ, ಇಓ ಪ್ರಶಾಂತ್ ಶೆಟ್ಟಿ ಇಳಯರಾಜ್ ಅವರನ್ನು ಗೌರವಿಸಿದರು.

