ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬದುಕಿಗೊಂದು ಗುರಿ ಇರಲಿ, ಅದರೊಂದಿಗೆ ಮಾಡುವ ಕಾರ್ಯದಲ್ಲಿ ಶ್ರದ್ಧೆಯೊಂದಿಗೆ ಪ್ರೀತಿ ಇರಲಿ ಇವೆರಡಕ್ಕೆ ಹಿರಿಯರ ಆಶೀರ್ವಾದ ಇದೆ ಎಂದರೆ ಬದುಕಿನಲ್ಲಿ ಯಶಸ್ಸು ಕಾಣುವಿರಿ. ಈ ಯಶಸ್ಸು ನಿಮ್ಮ ಮುಂದಿನ ಪೀಳಿಗೆಗೆ ಮಾದರಿಯಾಗಲಿ. ಈ ರೀತಿ ಬದುಕುವುದೇ ಜೀವನದ ಮೌಲ್ಯ ಎಂದು ಸೌಕೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪಿ. ಕಿಶನ್ ಹೆಗ್ಡೆ ಹೇಳಿದರು.
ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ “ಜೀವನ ಮೌಲ್ಯ”ವಿಶೇಷ ಉಪನ್ಯಾಸ ಮಾಲಿಕೆ 3ರಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಮನಿಷಾ ಪ್ರಾರ್ಥಿಸಿ, ಪ್ರಥಾ ಆರ್. ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ, ಅನುಶ್ರೀ ಕೆ. ಶೆಟ್ಟಿ ನಿರೂಪಿಸಿ, ಪ್ರಥ್ವಿ ಸ್ವಾಗತಿಸಿ, ಜ್ಯೋತಿ ವಂದಿಸಿದರು.

