Site icon Kundapra.com ಕುಂದಾಪ್ರ ಡಾಟ್ ಕಾಂ

ಗ್ರಾಮೀಣ ಭಾಗದ ಅರ್ಹ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಸಮೀಕ್ಷಾ ಕಾರ್ಯ ಆರಂಭ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
2024-25 ರಿಂದ 2028-29ನೇ ಸಾಲಿನ ವರೆಗೆ ಪ್ರಧಾನ ಮಂತ್ರಿ ಆವಾಸ್ (ಗ್ರಾಮೀಣ) ವಸತಿ ಯೋಜನೆಯಡಿ ವಸತಿ ರಹಿತ ಅರ್ಹ ಕುಟುಂಬಗಳಿಗೆ ಸಹಾಯಧನ ಆಧಾರಿತ ವಸತಿ ಸೌಲಭ್ಯವನ್ನು ಹಂತ ಹಂತವಾಗಿ ಕಲ್ಪಿಸುವ ಬಗ್ಗೆ ಅರ್ಹ ಫಲಾನುಭವಿಗಳನ್ನು ಗುರುತಿಸುವ ಸಮೀಕ್ಷಾ ಕಾರ್ಯವನ್ನು ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ಪ್ರಾರಂಭಿಸಲಾಗಿದೆ.

ಈ ಯೋಜನೆಯಡಿ ಅರ್ಹರಾಗಿದ್ದು, ವಸತಿ ಸೌಲಭ್ಯಕ್ಕೆ ಬೇಡಿಕೆ ಇರುವ ಫಲಾನುಭವಿಗಳು ಪಡಿತರ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ನರೇಗಾ ಉದ್ಯೋಗ ಚೀಟಿ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆ ಮತ್ತು ನಿವೇಶನ ಹೊಂದಿರುವ ಬಗ್ಗೆ ದಾಖಲೆಗಳೊಂದಿಗೆ ಸಂಬಂಧಪಟ್ಟ ಗ್ರಾಮ ಪಂಚಾಯತ್ ಕಛೇರಿಯನ್ನು ಸಂಪರ್ಕಿಸಿ ತಮ್ಮ ಹೆಸರನ್ನು ಬೇಡಿಕೆ ಪಟ್ಟಿಯಲ್ಲಿ ಸೇರಿಸಿಕೊಳ್ಳಬಹುದಾಗಿದೆ.

ಅರ್ಹ ವಸತಿ ರಹಿತರು AadhaarFaceRd ಮತ್ತು AwaasPlus 2024 ಆಪ್ ಗಳನ್ನು ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಂಡು AwaasPluss 2024 ಆಪ್ ನಲ್ಲಿ ಲಭ್ಯವಿರುವ Self Survey ಅವಕಾಶವನ್ನು ಬಳಸಿಕೊಂಡು ಸ್ವಯಂ ಆಗಿ ಸಮೀಕ್ಷಾ ಕಾರ್ಯವನ್ನು ನಿರ್ವಹಿಸಿ ಮಾಹಿತಿಯನ್ನು ಅಳವಡಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಗ್ರಾಮ ಪಂಚಾಯತ್ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version