Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಇಲಾಖಾ ದರದಲ್ಲಿ ತೆಂಗು ಸಸಿಗಳ ಲಭ್ಯ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಬ್ರಹ್ಮಾವರ ತಾಲೂಕು ವಾರಂಬಳ್ಳಿ ತೋಟಗಾರಿಕಾ ಕ್ಷೇತ್ರದಲ್ಲಿ ಮಾರಾಟಕ್ಕೆ ಯೋಗ್ಯವಿರುವ ಉತ್ತಮ ಗುಣಮಟ್ಟದ ತೆಂಗು ಸಸಿಗಳು ಲಭ್ಯವಿದ್ದು, ಆಸಕ್ತ ರೈತರುಗಳು ಹಾಗೂ ಸಂಘ ಸಂಸ್ಥೆಯವರು ವಾರಂಬಳ್ಳಿ ತೋಟಗಾರಿಕಾ ಕ್ಷೇತ್ರದ ಅಧಿಕಾರಿ ಅಥವಾ ಉಡುಪಿ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕ ಎಲ್. ಹೇಮಂತ ಕುಮಾರ್ ಅವರನ್ನು ಸಂಪರ್ಕಿಸಿ, ಖರೀದಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರದ ಅಧಿಕಾರಿ ಪವಿತ್ರ ರಾಜೇಶ್ ಮೊಬೈಲ್ ಸಂಖ್ಯೆ: 9008284192 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version