Site icon Kundapra.com ಕುಂದಾಪ್ರ ಡಾಟ್ ಕಾಂ

ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ ದೇವಸ್ಥಾನಗಳಾದ ಉಡುಪಿ ತಾಲೂಕಿನ ಆದಿಉಡುಪಿಯ ಶ್ರೀ ಮುಖ್ಯಪ್ರಾಣ ದೇವಸ್ಥಾನ, ತೆಂಕನಿಡಿಯೂರು ಗ್ರಾಮದ ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಪುತ್ತೂರು ಗ್ರಾಮದ ಶ್ರೀ ಮಡಿ ಮಲ್ಲಿಕಾರ್ಜುನ ದೇವಸ್ಥಾನ ಹಾಗೂ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಶ್ರೀ ಗುಹೇಶ್ವರ ದೇವಸ್ಥಾನಗಳಿಗೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಸಲ್ಲಿಸಲು ಮರು ಪ್ರಕಟಣೆ ಹೊರಡಿಸಲಾಗಿದೆ.

ಕನಿಷ್ಠ 25 ವರ್ಷ ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಮೂನೆ-1(ಬಿ) (22 ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿದ  ಅರ್ಜಿಯನ್ನು ಏಪ್ರಿಲ್ 17 ರ ಒಳಗಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ 206, ಬಿ ಬ್ಲಾಕ್, ಜಿಲ್ಲಾ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

Exit mobile version