Site icon Kundapra.com ಕುಂದಾಪ್ರ ಡಾಟ್ ಕಾಂ

ಮುಳ್ಳಿಕಟ್ಟೆ: ರಿಕ್ಷಾ – ಕಾರು ಢಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ,ಎ.05:
ತಾಲೂಕಿನ ಮುಳ್ಳಿಕಟ್ಟೆ ಜಂಕ್ಷನ್‌ನಲ್ಲಿ ರಿಕ್ಷಾ – ಕಾರು ಢಿಕ್ಕಿಯಾಗಿ ರಿಕ್ಷಾ ಪಲ್ಟಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಇಂದು ಬೆಳಿಗ್ಗೆ ನಡೆದಿದೆ.

ರಿಕ್ಷಾ ಚಾಲಕ ಗೋಪಾಲ ಅವರ ತಲೆ, ಮುಖ, ಎದೆ ಹಾಗೂ ಕಾಲಿಗೆ ಬಲವಾದ ಏಟು ಬಿದ್ದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಿಗ್ಗೆ ಮೃತಪಟ್ಟಿರುವುದಾಗಿ ಮೂಲಗಳು ತಿಳಿಸಿವೆ.

ಮುಳ್ಳಿಕಟ್ಟೆ ಜಂಕ್ಷನ್‌ನಲ್ಲಿ ಗುರುವಾರ ಸಂಜೆ 7 ಗಂಟೆಯ ಸುಮಾರಿಗೆ ನಡೆದಿದ್ದು, ರಿಕ್ಷಾ ಚಾಲಕ ಗೋಪಾಲ ಹಾಗೂ ಕಾರಿನಲ್ಲಿದ್ದ ಚಂದ್ರ ಎಂಬ ಇಬ್ಬರು ಗಾಯಗೊಂಡಿದ್ದರು. ಗೋಪಾಲ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು,  ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ಗಂಗೊಳ್ಳಿ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version