Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಕಿರಾಣಿ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ನಗರದ ಚಿಕ್ಕನಸಾಲು ರಸ್ತೆಯಲ್ಲಿರುವ ಚಂದ್ರಶೇಖರ್ ಅವರ ಕಿರಾಣಿ ಅಂಗಡಿಗೆ ಬುಧವಾರ ಬೆಳಗ್ಗೆ ಬೆಂಕಿ ಬಿದ್ದು 4 ಲಕ್ಷ ರೂ.ಗೂ ಹೆಚ್ಚು ನಷ್ಟ ಸಂಭವಿಸಿದೆ.  

ಮಾಲಿಕರು ಬೆಳಿಗ್ಗೆ ಅಂಗಡಿಯ ಬಾಗಿಲನ್ನು ತೆರೆದು ದೇವರಿಗೆ ದೀಪವನ್ನು ಹಚ್ಚಿ ಹತ್ತಿರದ ಶ್ರೀ ಮೈಲಾರೇಶ್ವರ ದೇವಸ್ಥಾನಕ್ಕೆ ಹೋಗಿ ಕೆಲವೇ ನಿಮಿಷಗಳಲ್ಲಿ ಅಂಗಡಿಗೆ ವಾಪಾಸ್ಸು ಬರುವುದರೊಳಗೆ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಂಗಡಿಯೊಳಗಿದ್ದ  ಫ್ರಿಡ್ಜ್, ಕಪಾಟು, ಶೋಕೇಸ್, ಮುಂತಾದ  ಪೀಠೋಪಕರಣಗಳು , ಕಿರಾಣಿ ಸಾಮಗ್ರಿಗಳು ಸಂಪೂರ್ಣ ಸುಟ್ಟು ಹೋಗಿದೆ.

ಅಗ್ನಿ ಶಾಮಕದಳದವರು ಆಗಮಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.  

Exit mobile version