ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಸಿಎ/ಸಿಎಸ್/ಸಿಎಮ್‌ಎ ವಿದ್ಯಾರ್ಥಿಗಳಿಗೆ ಪರೀಕ್ಷಾ ಒತ್ತಡ ನಿರ್ವಹಣೆ ಕುರಿತಾಗಿ ವಿಭಿನ್ನ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.
ಉಡುಪಿಯ ಆರ್ಟ್ ಆಫ್ ಲಿವಿಂಗ್‌ನ ಯೋಗ ಮತ್ತು ಪ್ರಾಣಾಯಾಮ ತರಬೇತುದಾರರಾದ ಶೈಲಜಾ ಕೃಷ್ಣಾನಂದ ಅವರು ಒತ್ತಡ ನಿರ್ವಹಣೆ ಹಾಗೂ ಏಕಾಗೃತೆಯ ಸಾಧನೆಯನ್ನು ಆಸನ ಹಾಗೂ ಪ್ರಾಣಾಯಾಮದ ಮೂಲಕ ಹೇಗೆ ಸಿದ್ಧಿಸಿಕೊಳ್ಳುವುದು ಎನ್ನುವುದರ ಕುರಿತು ಅರಿವು ಮೂಡಿಸಿದರು. ಇದೇ ಸಂದರ್ಭದಲ್ಲಿ ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.
ಕಾಲೇಜಿನ ಪ್ರಾಚಾರ್ಯರಾದ ಕೊತ್ತಾಡಿ ಉಮೇಶ್ ಶೆಟ್ಟಿ ಅವರು ಪ್ರೊಫೆಷನಲ್ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಜೀವನ ಪದ್ಧತಿ ಇರಬೇಕು ಅದರಲ್ಲಿ ಅಗ್ರಸ್ಥಾನದಲ್ಲಿ ಈ ಪ್ರಾಣಾಯಾಮ, ಆಸನ, ಮುದ್ರೆಗಳ ಬಳಕೆ ಬಹಳ ಪರಿಣಾಮಕಾರಿ ಎಂದು ಶುಭಾಶಂಸನೆ ಮಾತುಗಳನ್ನಾಡಿದರು.
ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ವಿ. ಭಟ್ ಹಾಗೂ ಕಾರ್ಯಕ್ರಮ ಸಂಯೋಜಕರಾದ ಸುಹಾಸ್ ಜಟ್ಟಿಮನೆ ಮತ್ತು ಶ್ವೇತ ಭಂಡಾರಿ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.
ಕಾಲೇಜಿನ ತೃತೀಯ ಬಿ.ಕಾಂ.ನ ವಿದ್ಯಾರ್ಥಿನಿ ಪವಿತ್ರ ಪೈ ನಿರೂಪಿಸಿದರು.

