Site icon Kundapra.com ಕುಂದಾಪ್ರ ಡಾಟ್ ಕಾಂ

ಪ್ರತಿಷ್ಟಿತ ಶಾಲೆಗಳಲ್ಲಿ ಪ್ರವೇಶಾತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪ್ರತಿಷ್ಟಿತ ಶಾಲೆ ಯೋಜನೆಯಡಿ ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಿಗೆ ಅರ್ಹ ಪರೀಕ್ಷೆಯ ಮೂಲಕ ಪ್ರವೇಶಾವಕಾಶ ಕಲ್ಪಿಸಲು ಪ.ಜಾತಿಯ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 3 ಕೊನೆಯ ದಿನ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದೊಳಗೆ ಅರ್ಜಿಯನ್ನು ಹಾಗೂ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಉಪ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ. ರಜತಾದ್ರಿ, ಮಣಿಪಾಲ ಇಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 0820-2574892 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version