Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಯುವಕ ನಾಪತ್ತೆ, ಪ್ರಕರಣ ದಾಖಲು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ನಿವಾಸಿ ಧನರಾಜ (20) ಎಂಬ ಯುವಕನು ಮಾರ್ಚ್ 27 ರಂದು ಮನೆಯಿಂದ ಕೆಲಸಕ್ಕೆಂದು ಹೋದವರು ಸಂಬಂಧಿಕರ ಮನೆಗೂ ಹೋಗದೇ ಈವರೆಗೂ ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ.

6 ಅಡಿ ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ  ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಮೊ.ನಂ: 9480805468, ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರು ಮೊ.ನಂ: 9480805433 ಅಥವಾ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version