Site icon Kundapra.com ಕುಂದಾಪ್ರ ಡಾಟ್ ಕಾಂ

ಬಾರಕೂರು: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸ.ಪ್ರ.ದ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ: ಕ್ರೀಡೆಯಿಂದ ವ್ಯಕ್ತಿಯ ಜೀವನಕ್ಕೆ ಹಲವು ಉಪಯುಕ್ತ ಸಂದೇಶಗಳು ಸಿಗುತ್ತವೆ. ವೇಗ, ದೂರ ಮತ್ತು ಎತ್ತರ ಇವು ಮೂರು ಯಶಸ್ಸನ್ನು ಪಡೆಯಲು ಜೀವನದಲ್ಲಿ ಅಳವಡಿಸಿಕೊಳ್ಳಬಹುದು ಎಂದು ಬಾರಕೂರು ನ್ಯಾಷನಲ್ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಉಮೇಶ್ ಶೆಟ್ಟಿ ಹೇಳಿದರು.

ಅವರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರಕೂರು ಇದರ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಭಾಸ್ಕರ ಶೆಟ್ಟಿ ಸಲ್ವಾಡಿ ಅವರು ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವುಕ್ಕಿಂತ ಕ್ರೀಡಾಸ್ಪೂರ್ತಿ ಮುಖ್ಯ. ಶಿಸ್ತಿನ ಜೀವನ ರೂಪಿಸಿಕೊಳ್ಳಲು ಕ್ರೀಡೆ ಸಹಕಾರಿ. ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ ಎಂದರು. 

ಮುಖ್ಯ ಅತಿಥಿಯಾಗಿ ಹನೆಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಹರೀಶ್ ಸಿ.ಕೆ., ದೈಹಿಕ ಶಿಕ್ಷಣ ನಿರ್ದೇಶಕಿ ಸುಮತಿ, ಬೋಧಕ ಬೋಧಕೇತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸಹಾಯಕ ಪ್ರಾಧ್ಯಾಪಕ ವೀರೇಶ್ ನಿರೂಪಿಸಿ, ಗಣಕವಿಜ್ಞಾನ ವಿಭಾಗದ ಪ್ರಾಧ್ಯಾಪಕ ಲಕ್ಷಿತ್ ಪೂಜಾರಿ ಸ್ವಾಗತಿಸಿ, ದ್ವಿತೀಯ ಬಿಸಿಎ ವಿದ್ಯಾರ್ಥಿನಿ ರಕ್ಷಿತಾ ವಂದಿಸಿದರು. ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

Exit mobile version