Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಪರಿವೀಕ್ಷಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಕೈಗಾರಿಕಾ ಪರಿವೀಕ್ಷಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಚಂದು ಮಸಾಲ ಇಂಡಸ್ಟ್ರಿ ಮತ್ತು ರಾಜಾರಾಮ್ ಪಾಲಿಮರ್ ಕೋಟೇಶ್ವರ ಇಲ್ಲಿಗೆ ವಿದ್ಯಾರ್ಥಿಗಳು ಭೇಟಿ ನೀಡಿದರು.

ಈ ಸಂದರ್ಭ ಕಾಲೇಜಿನ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಸಂಯೋಜಕರಾದ ರಾಜೇಶ್ ಶೆಟ್ಟಿ ವಕ್ವಾಡಿ, ಕಿಶೋರ್ ಕೃಷ್ಣ ಮರಕಾಲ ಹಾಗೂ ಚಂದು ಮಸಾಲ ಇಂಡಸ್ಟ್ರಿ ಮಾಲೀಕರಾದ ಮಂಜುನಾಥ್ ಕಾಮತ್ ಹಾಗೂ ರಾಜಾರಾಮ್ ಪಾಲಿಮರ್ ಮಾಲೀಕರಾದ ಸುರೇಶ್ ಕಾಮತ್ ಮತ್ತು ಜಗದೀಶ್ ಕಾಮತ್ ಉಪಸ್ಥಿತರಿದ್ದರು.

Exit mobile version