Site icon Kundapra.com ಕುಂದಾಪ್ರ ಡಾಟ್ ಕಾಂ

ಮಂಗಳೂರು ವಿವಿ ಅಂತರ ಕಾಲೇಜು ಉಡುಪಿ ವಲಯ ಕ್ರಿಕೆಟ್: ಆಳ್ವಾಸ್‌ಗೆ ಪ್ರಶಸ್ತಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಮೂಡುಬಿದಿರೆ:
ಬ್ರಹ್ಮಾವರದ ಸೈಂಟ್ ಮೇರಿಸ್ ಸಿರಿಯನ್ ಕಾಲೇಜು ಹಾಗೂ  ಮಂಗಳೂರು ವಿವಿ ಜಂಟಿ ಆಶ್ರಯದಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಉಡುಪಿ ವಲಯ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಕ್ರಿಕೆಟ್ ತಂಡವು ಜಯಶಾಲಿಯಾಯಿತು.

ಫೈನಲ್ ಪಂದ್ಯದಲ್ಲಿ ಕುಂದಾಪುರದ ಬಿಬಿ ಹೆಗ್ಡೆ ಕಾಲೇಜಿನ ತಂಡವನ್ನು  8 ವಿಕೆಟ್‌ಗಳ ಅಂತರದಿಂದ ಗೆದ್ದು, ಶಿರ್ವ ಲೆಸ್ಲಿ ಡಿಸೋಜಾ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

ಇದಕ್ಕೂ ಮುನ್ನ ಸೆಮಿಫೈನಲ್ ಪಂದ್ಯದಲ್ಲಿ ಬ್ರಹ್ಮಾವರದ ಎಸ್‌ಎಮ್‌ಎಸ್ ಕಾಲೇಜಿನ ತಂಡದ ವಿರುದ್ಧ 23 ರನ್‌ಗಳ ಅಂತರದಲ್ಲಿ ಗೆದ್ದು ಫೈನಲ್ ಪ್ರವೇಶಿಸಿತ್ತು. ಆಳ್ವಾಸ್ ಕಾಲೇಜಿನ ಜಿಷ್ಣು ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು.

ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ. 

Exit mobile version