Site icon Kundapra.com ಕುಂದಾಪ್ರ ಡಾಟ್ ಕಾಂ

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆಯು ಇತ್ತೀಚಿಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸದಾನಂದ ಕಾಮತ್  ಮಾತನಾಡಿ, ಮಗುವಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಶಿಕ್ಷಕರ ಜವಾಬ್ದಾರಿ ಬಹಳವಿದೆ. ಅದಕ್ಕಾಗಿ ಕಾಲೇಜು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಕೇಂದ್ರ ಸರ್ಕಾರದ ಕೌಶಲ್ಯ ಅಭಿವೃದ್ಧಿ ಯೋಜನೆಯ ಕಾರ್ಯಕ್ರಮ ಪಿ.ಎಮ್.ಕೆ ವಿ.ವಾಯ್  ಭಂಡಾರ್ಕಾರ್ಸ್ ಕಾಲೇಜಿಗೆ ದೊರೆತಿರುವ ಕುರಿತು ಅಭಿನಂದಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜಿನ ಉದ್ಯೋಗ ಆಧಾರಿತ  ಮತ್ತು ಅದಕ್ಕೆ ಪೂರಕ ಸೌಲಭ್ಯಗಳ ಕುರಿತು ವಿವರಿಸಿದರು.

ಕಾಲೇಜಿನ ಅರಕ್ಷಕ ಶಿಕ್ಷಕ ಸಂಘದ ಕಾರ್ಯದರ್ಶಿ ಸಂಜೀವ ತೆಕ್ಕಟ್ಟೆ ಉಪಸ್ಥಿತರಿದ್ದರು.

ಕಂಪ್ಯೂಟರ್ ವಿಭಾಗದ ಉಪನ್ಯಾಸಕ ಮುಕುಂದ ಭಟ್ ಕಾಲೇಜಿನ ತಂತ್ರಜ್ಞಾನ ಸೌಲಭ್ಯಗಳ ಬಗ್ಗೆ ತಿಳಿಸಿದರು. ಅನ್ವಯಿಕ ವಿಜ್ಞಾನ ವಿಭಾಗದ ವಿದ್ಯಾರಾಣಿ ಕಾರ್ಯಕ್ರಮ ನಿರೂಪಿಸಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ ಸ್ವಾಗತಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುಮಾ ವಂದಿಸಿದರು.

Exit mobile version