Site icon Kundapra.com ಕುಂದಾಪ್ರ ಡಾಟ್ ಕಾಂ

ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಉಪ್ಪಿನಕುದ್ರು ನಾಗಶ್ರೀಗೆ ಕಂಚಿನ ಪದಕ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಜಮ್ಮು ಕಾಶ್ಮೀರದಲ್ಲಿ ನಡೆದ ಅಖಿಲ ಭಾರತ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಉಪ್ಪಿನಕುದ್ರು ಗ್ರಾಮದ ನಾಗಶ್ರೀ 76 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.

ಮೇ ತಿಂಗಳಲ್ಲಿ ನಡೆಯುವ ಏಷ್ಯನ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ ಗೆ ಕರ್ನಾಟಕದ ಮಹಿಳಾ ವಿಭಾಗದಿಂದ ಆಯ್ಕೆಯಾಗಿದ್ದಾರೆ.

ಗ್ರಾಮೀಣ ಪ್ರದೇಶದ ಅವರು ಕಠಿಣ ಪರಿಶ್ರಮದಿಂದ ವೇಯ್ಟ್‌ ಲಿಫ್ಟಿಂಗ್ ಹಾಗೂ ಪವರ್ ಲಿಫ್ಟಿಂಗ್ ಸಾಧನೆ ಮಾಡಿ 50ಕ್ಕೂ ಹೆಚ್ಚು ಪದಕಗಳನ್ನು ಗೆದ್ದುಕೊಂಡಿದ್ದಾರೆ.

Exit mobile version