ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯ ಪೂರ್ವಭಾವಿ ಸಭೆ ನಡೆಯಿತು.
ರಾಜ್ಯದ ಪ್ರತಿಷ್ಠಿತ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯು ಎ. 26 ಶನಿವಾರದಂದು ನಡೆಯಲಿದೆ.
ಪೂರ್ವಭಾವಿ ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ, ಸಹಕಾರ ಭಾರತೀಯ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಪ್ರಾತಿನಿಧ್ಯ ಕೊಟ್ಟು ಈ ಬಾರಿ ಹೊಸ ಉತ್ಸಾಹಿ ಹೈನುಗಾರರನ್ನು ಅಭ್ಯರ್ಥಿಗಳನ್ನಾಗಿ ಕಣಕ್ಕೆ ಇಳಿಸಿದ್ದು.
ಕುಂದಾಪುರ ಉಪವಿಭಾಗ ಕ್ಷೇತ್ರದ 7 ಸಾಮಾನ್ಯ ಸ್ಥಾನಗಳಿಗೆ ಅಭ್ಯರ್ಥಿಯಾಗಿ ಕುಂದಾಪುರ ತಾಲೂಕಿನಿಂದ ಕಾಡೂರ ಸುರೇಶ್ ಶೆಟ್ಟಿ, ಬೈಂದೂರು ತಾಲೂಕಿನಿಂದ ಸುಬ್ಬಣ್ಣಶೆಟ್ಟಿ, ಟಿ.ವಿ ಪ್ರಾಣೇಶ್ ಯಡಿಯಾಳ್, ಕಾರ್ಕಳ ತಾಲೂಕಿನಿಂದ ಕೆ. ಮೋಹನ್ ದಾಸ್ ಅಡ್ಯಾಂತಾಯ, ಹೆಬ್ರಿ ತಾಲೂಕಿನಿಂದ ಭೋಜ ಪೂಜಾರಿ, ಕಾಪುಯಿಂದ ಅಶೋಕ್ ರಾವ್, ಉಡುಪಿಯಿಂದ ಹೆರ್ಗ ದಿನಕರ್ ಶೆಟ್ಟಿ ಮತ್ತುಉಡುಪಿ ಜಿಲ್ಲೆಯ ಮಹಿಳಾ ಮೀಸಲು ಕ್ಷೇತ್ರದ ಅಭ್ಯರ್ಥಿ ಬ್ರಹ್ಮಾವರ ತಾಲೂಕಿನ ಶಾಂತ ಎಸ್. ಭಟ್ ಅವರು ಸ್ಪರ್ಧಿಸುತ್ತಿದ್ದು, ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಉಡುಪಿ ಜಿಲ್ಲೆಯ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಎಲ್ಲಾ 325 ಅಭ್ಯರ್ಥಿಗಳನ್ನು ಭೇಟಿಯಾಗಿ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಪಕ್ಷದ ಕಾರ್ಯಕರ್ತರು ಮುಖಂಡರು ಸಕ್ರಿಯವಾಗಿ ತೊಡಗಿಸಿಕೊಂಡು ಅಭ್ಯರ್ಥಿ ಗೆಲುವಿಗೆ ಸಹಕರಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ಕುಂದಾಪುರ ಬಿಜೆಪಿ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಅವರು ಪ್ರಸ್ತಾವಿಕ ಮಾತುಗಳನ್ನಾಡಿದರು.
ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ಸುಧೀರ್ ಕೆ.ಎಸ್. ವಂದಿಸಿದರು.
ಸಭೆಯ ವೇದಿಕೆಯಲ್ಲಿ ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿ ಕಾಡೂರು ಸುರೇಶ್ ಶೆಟ್ಟಿ, ಸುಬ್ಬಣ್ಣ ಶೆಟ್ಟಿ, ಪ್ರಾಣೇಶ್ ಯಡಿಯಾಳ ಅವರು ಉಪಸ್ಥಿತರಿದ್ದರು.
ಸದ್ರಿ ಕಾರ್ಯಕ್ರಮದಲ್ಲಿ ಕುಂದಾಪುರ ಬಿಜೆಪಿ ಮಂಡಲದ ಸರ್ವ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪಕ್ಷದ ಮುಖಂಡರು ಕಾರ್ಯಕರ್ತರು ಸಭೆಯಲ್ಲಿ ನೆರೆದಿದ್ದರು.

