Kundapra.com ಕುಂದಾಪ್ರ ಡಾಟ್ ಕಾಂ

ಮಹಿಳೆಯರು ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು: ಮೋಟಮ್ಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಡಾ. ಬಿ. ಆರ್ ಅಂಬೇಡ್ಕರ್ ಮಹಿಳಾ ಸಂಘ ರಿ. ಬೈಂದೂರು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮ ಜಯಂತಿ ಹಾಗೂ ಸಂಘದ 15ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಇಲ್ಲಿನ ಶಾರದ ವೇದಿಕೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕರ್ನಾಟಕದ ಮಾಜಿ ಸಚಿವೆ ಮೋಟಮ್ಮ ಅವರು ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು. ಆರ್ಥಿಕವಾಗಿ ಶೈಕ್ಷಣಿಕವಾಗಿ ಸಬಲರಾಗಬೇಕು ಎಂದರು ಹಾಗೂ ಸಂವಿಧಾನ ಪ್ರತಿಯೊಬ್ಬ ವ್ಯಕ್ತಿಯ ಉಸಿರಿದ್ದಂತೆ ಸಂವಿಧಾನವನ್ನು ಬದಲಾಯಿಸಲು ಮುಂದಾದಲ್ಲಿ ದಲಿತ ಸಮುದಾಯದ ಜೇನುಗೂಡಿಗೆ ಕೈ ಇತ್ತಂತೆ ಎನ್ನುವ ಎಚ್ಚರಿಕೆ ಮಾತುಗಳನ್ನು ಸಹ ಈ ಸಂದರ್ಭದಲ್ಲಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ನಾಗರತ್ನ ಭಾಸ್ಕರ್ ವಹಿಸಿದ್ದರು.

ಸಭೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಗುರುತಿಸಿಕೊಂಡ ಸುಲೋಚನಾ ಹಾಗೂ ಸಾಮಾಜಿಕ ಕಲಾಕ್ಷೇತ್ರದಲ್ಲಿ ಗುರುತಿಸಿಕೊಂಡ ಬೆಂಕಿ ಚಿರಂತ್ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬ್ಯಾಗ ವಿತರಣೆ ಮತ್ತು ಎಸ್. ಎಸ್.ಎಲ್.ಸಿ , ಪಿಯುಸಿ, ಡಿಗ್ರಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಜಿಲ್ಲಾ ನಾಯಕರುಗಳನ್ನು ಗುರುತಿಸಲಾಯಿತು. ಕ್ರೀಡಾಕೂಟದಲ್ಲಿ ಭಾಗವಹಿಸಿದ ಮಕ್ಕಳು ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಇದರ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ್,  ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು,  ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ , ಶ್ಯಾಮ್ ರಾಜ್ ಬಿತಿ೯, ನಿವೃತ್ತ ಬ್ಯಾಂಕ್ ಅಧಿಕಾರಿಗಳಾದ ಗೋವಿಂದ ಎಂ., ಕೀರ್ತಿ ಬೈಂದೂರು,  ದ.ಸಂ.ಸ ಜಿಲ್ಲಾ ಸಮಿತಿಯ ಸದಸ್ಯರಾದ ಗೀತಾ,  ತಾಲೂಕು ಸಮಿತಿಯ ವಿನಯ ಉಪಸ್ಥಿತರಿದ್ದರು.

 ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ರೇಣುಕಾ ಸ್ವಾಗತಿಸಿ, ಚೈತ್ರ, ಶಂಭು ಗುಡ್ಡಮಾಡಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version