Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ತಾಲೂಕು ಕಛೇರಿ ಎದುರು ಅರೆಬೆತ್ತಲೆ ಪ್ರತಿಭಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಅನವಶ್ಯಕ ಕೇಸು ದಾಖಲಿಸಿ ಕಿರಿಕುಳ ನೀಡಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಸೋಮವಾರ ಇಲ್ಲಿನ ತಾಲೂಕು ಕಚೇರಿ ಎದುರು ಬಿಲ್ಲವ ಹೋರಾಟಗಾರ ಕಿರಣ್ ಪೂಜಾರಿ ಮುದ್ದುಗುಡ್ಡೆ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

ಸರಕಾರಿ ಜಾಗವನ್ನು ಒತ್ತುವರಿ ಮಾಡಿರುವವರ ಪರ ನಿಂತು ದಲಿತ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ್ದಲ್ಲದೆ ನ್ಯಾಯಕ್ಕಾಗಿ ಹೋರಾಟ ನಡೆಸಿದ ತನ್ನ ಮೇಲೆ ಪೊಲೀಸರು, ವಕೀಲರು, ಗ್ರಾಪಂ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಅವರು ಆರೋಪಿಸಿದರು.

ಪ್ರತಿಭಟನೆ ಸ್ಥಳಕ್ಕೆ ಡಿವೈಎಸ್ಪಿ ಎಚ್. ಡಿ. ಕುಲಕರ್ಣಿ, ತಹಸೀ ಲ್ದಾರ್ ಪ್ರದೀಪ ಕುರುಡೇಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.

Exit mobile version