ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ಎರಡು ದಿನ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆ ‘ಪ್ರಜ್ಞಾ 2025’ ರಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮೊದಲನೇ ದಿನ ಶೈಕ್ಷಣಿಕ ಸ್ಪರ್ಧೆಯಲ್ಲಿ 15 ಬಹುಮಾನ, ಎರಡನೇ ದಿನ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಆಯೋಜಿಸಿದ ಎಲ್ಲಾ ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನ ಪಡೆದು, ಒಟ್ಟು 24 ಬಹುಮಾನ ಪಡೆಯುವ ಮೂಲಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಎರಡೂ ವಿಭಾಗಗಳಲ್ಲಿ ಸಮಗ್ರ ಪುರಸ್ಕಾರದೊಂದಿಗೆ ಚಾಂಪಿಯನ್ನಾಗಿ ಮೂಡಿಬಂದಿದ್ದಾರೆ.
ಇದೇ ಸಂದರ್ಭ ಪ್ರಾಧ್ಯಾಪಕರಿಗೆ ಆಯೋಜಿಸಿದ ಸಂಗೀತ ಸ್ಪರ್ಧೆಯಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕಿ ದೀಪಿಕಾ ಜಿ. ಪ್ರಥಮ ಸ್ಥಾನ ಪಡೆದಿದ್ದಾರೆ. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಐಕ್ಯೂಎಸಿ ಸಂಯೋಜಕಿ ಹಾಗೂ ಸಾಂಸ್ಕೃತಿಕ ತಂಡದ ಸಂಯೋಜಿಕಿ ದೀಪಿಕಾ ಜಿ., ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ರಜತ್ ಬಂಗೇರ್ ಅಭಿನಂದಿಸಿದ್ದಾರೆ.

