Site icon Kundapra.com ಕುಂದಾಪ್ರ ಡಾಟ್ ಕಾಂ

ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರ ಅವರಿಗೆ ವಿಕ್ರಮ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಸನಾತನ ಫೌಂಡೇಶನ್ ಬೆಂಗಳೂರು ಸಾರಥ್ಯದಲ್ಲಿ ಉಡುಪಿ ಮಠದ ಸ್ವಾಮೀಜಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರು ಹಾಗೂ ಅವರ ಪ್ರಿಯ ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಸ್ವಾಮೀಜಿ ಅವರಿಂದ ಕೊಡಮಾಡುವ ಅತ್ಯುನ್ನತ ಪ್ರಶಸ್ತಿ ವಿಕ್ರಮ ಪ್ರಶಸ್ತಿಯನ್ನು ಹೆಮ್ಮಾಡಿ ಹಾಗೂ ಕಿರಿಮಂಜೇಶ್ವರದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಗಣೇಶ ಮೊಗವೀರ ಅವರಿಗೆ ಶುಕ್ರವಾರದಂದು ಉಡುಪಿ ರಾಜಾಂಗಣದಲ್ಲಿ ನಡೆದ ವೈಭವದ ಸಮಾರಂಭದಲ್ಲಿ ಶ್ರೀಗಳು ಪ್ರಶಸ್ತಿ ಪ್ರದಾನ ಮಾಡಿದರು.

ಶ್ರೀ ಗಣೇಶ ಮೊಗವೀರ ಅವರು ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಹಾಗೂ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಎರಡು ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುತ್ತಿದ್ದು ಸಾವಿರಾರು ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದಾರೆ.

ಇವರ ಶಿಕ್ಷಣ ಕ್ಷೇತ್ರದ ಸಾಧನೆ ಹಾಗೂ ಸೇವೆಯನ್ನು ಪರಿಗಣಿಸಿ ಶ್ರೀ ಗಣೇಶ ಮೊಗವೀರ ಅರವಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

Exit mobile version