Kundapra.com ಕುಂದಾಪ್ರ ಡಾಟ್ ಕಾಂ

ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಶಿಕ್ಷಕ ರಕ್ಷಕರ ಸಭೆ ಮತ್ತು ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಭೆ ಮತ್ತು ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಇತ್ತೀಚಿಗೆ ಜರುಗಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಅನುಪಮ ಎಸ್. ಶೆಟ್ಟಿ ಕಾಯಕ್ರಮನುದ್ದೇಶಿಸಿ ಮಾತನಾಡಿ, ಬದುಕಿನ ತತ್ವ, ನಿಷ್ಠೆಗಳನ್ನು ಮೈಗೂಡಿಸಿಕೊಂಡು ಗೆಲುವಿನ ಹಾದಿಯಲ್ಲಿ ಸಾಗುವ ಛಲ ವಿದ್ಯಾರ್ಥಿಗಳಿಗಿದ್ದರೆ ಯಶಸ್ಸನ್ನು ಸಾಧಿಸಬಹುದು. ಹೆತ್ತವರು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾಗಿ ಅವರನ್ನು ಯೋಗ್ಯ ವ್ಯಕ್ತಿಗಳನ್ನಾಗಿಸಬೇಕು. ಜೊತೆಗೆ ಹೆತ್ತವರು ಮಕ್ಕಳಲ್ಲಿ ಹುದುಗಿರುವ ಪ್ರತಿಭೆ, ಸಾಮರ್ಥ್ಯಗಳನ್ನು ಬೆಳೆಸಬೇಕೆ ಹೊರತು ಅವರ ಮೇಲೆ ಒತ್ತಡ ಹೇರಬಾರದು ಮತ್ತು ಮಕ್ಕಳಲ್ಲಿ ಸಕಾರಾತ್ಮಕ ಮಾತುಗಳನ್ನು ಆಡುವಂತೆ ಹಾಗೂ ಸಹಕಾರ ಮನೋಭಾವವನ್ನು ಮಕ್ಕಳಲ್ಲಿ ಬೆಳೆಸಿ ಹೃದಯವಂತರನ್ನಾಗಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದದರು.

ಕಾರ್ಯಕ್ರಮದಲ್ಲಿ ಸಂಯೋಜಕರಾದ ಸೂರಜ್ ಕುಮಾರ್ ಶೆಟ್ಟಿ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹರೀಶ್ ಕಾಂಚನ್ ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕಿ ಮಮತಾ ನಿರೂಪಿಸಿ, ಐಕ್ಯೂಎಸಿ ಘಟಕದ ಸಂಯೋಜಕರಾದ ಸಂದೀಪ ಕೆ. ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ. ರವಿಚಂದ್ರ ವಂದಿಸಿದರು.

Exit mobile version