Kundapra.com ಕುಂದಾಪ್ರ ಡಾಟ್ ಕಾಂ

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಉಡುಪಿಗೆ ದ್ವೀತೀಯ ಸ್ಥಾನ, ದ.ಕ ಪ್ರಥಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
2024-2025ನೇ ಸಾಲಿನ ರಾಜ್ಯದ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಕ್ರಮವಾಗಿ 91.12% ಮತ್ತು 89.96% ಫಲಿತಾಂಶದೊಂದಿಗೆ ರಾಜ್ಯದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿವೆ. ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.

22 ವಿದ್ಯಾರ್ಥಿಗಳು 625 ಅಂಕಗಳಲ್ಲಿ 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಮಟ್ಟದಲ್ಲಿ ಉನ್ನತ ರ‍್ಯಾಂಕ್ ಗಳಿಸಿದ್ದಾರೆ. ಈ ವರ್ಷದ ಉತ್ತೀರ್ಣ ಶೇಕಡಾವಾರು 66.14% ಆಗಿದ್ದು, ಕಳೆದ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಹೋಲಿಸಿದರೆ 8% ಹೆಚ್ಚಳವಾಗಿದೆ.

2025 ಮಾರ್ಚ್​ 21ರಿಂದ ಏಪ್ರಿಲ್​ 4 ರವರೆಗೆ ರಾಜ್ಯದ 2,818 ಕೇಂದ್ರಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲಾಗಿತ್ತು. 4,61563 ಹುಡುಗರು ಮತ್ತು 4,34,884 ಹುಡಗಿಯರು ಪರೀಕ್ಷೆ ಬರೆದಿದ್ದರು.

Exit mobile version