Site icon Kundapra.com ಕುಂದಾಪ್ರ ಡಾಟ್ ಕಾಂ

ಮೇ.04ರಂದು ಕೋಟದಲ್ಲಿ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ – ಕಾಂಬ 2025

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾ.ಪಂ. ಉಸಿರು ಕೋಟ, ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಆಶ್ರಯದಲ್ಲಿ ಮೇ. 04 ರಂದು ಬೆಳಗ್ಗೆ 9 ರಿಂದ  ಕೋಟದ ಕಾರಂತ ಥೀಮ್ ಪಾರ್ಕಿನಲ್ಲಿ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ – ಕಾಂಬ 2025 ಜರಗಲಿದೆ.

ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಸಾಹಿತಿ  ಡಾ. ಅಣ್ಣಯ್ಯ ಕುಲಾಲ್ ಉಳ್ತೂರು ವಹಿಸಲಿದ್ದಾರೆ. ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಭಾಧ್ಯಕ್ಷತೆಯನ್ನು ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಸತೀಶ್ ಬಾರಿಕೆರೆ ವಹಿಸಲಿದ್ದಾರೆ.

ಡಾ. ವಿಜಯ ಬಲ್ಲಾಳ್ ಮೊದಲಾದವರು ಉಪಸ್ಥಿತರಿರುವರು. ಸಮ್ಮೇಳನದ ಪ್ರಯುಕ್ತ ಬೆಳಗ್ಗೆ 11.30ರಿಂದ ಕವಿಗೋಷ್ಠಿ, ಕುಂದಕನ್ನಡದ ಹರಟೆ, ಅಧ್ಯಕ್ಷರೊಂದಿಗೆ ಮಾತುಕತೆ, ಕೆ.ಸಿ.ಕುಂದರ್ ದತ್ತಿನಿಧಿ ಪ್ರದಾನ ನಡೆಯಲಿದೆ.

ಕುಂದಾಪ್ರ ಕನ್ನಡಕ್ಕಾಗಿ ಸಾಕಷ್ಟು ಸೇವೆ ಸಲ್ಲಿಸಿದ ಪಂಜು ಗಂಗೊಳ್ಳಿ, ಯಾಕೂಬ್ ಖಾದರ್ ಗುಲ್ವಾಡಿ, ಅವರನ್ನು ಗೌರವಿಸಲಾಗುವುದು. ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಆನಂದ ಸಿ. ಕುಂದರ್ ವಹಿಸಲಿದ್ದು, ಡಾ. ಬಾಲಕೃಷ್ಣ ಶೆಟ್ಟಿ ಸಮಾರೋಪ ಭಾಷಣಗೈಯಲಿದ್ದಾರೆ ಎಂದು ಸಮ್ಮೇಳನದ ಸಂಯೋಜಕ ನರೇಂದ್ರ ಕುಮಾರ್ ಕೋಟ ತಿಳಿಸಿದ್ದಾರೆ.

Exit mobile version