Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನ ಆಧಾರದ ಮೇಲೆ ಯುವ ಪರಿವರ್ತಕರ ಹುದ್ದೆಯ ಕರ್ತವ್ಯ ನಿರ್ವಹಿಸಲು ಯಾವುದೇ ಪದವಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 21 ರಿಂದ 35 ವರ್ಷದೊಳಗಿನ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕನ್ನಡ ಸ್ಪಷ್ಠವಾಗಿ ಮಾತನಾಡಬಲ್ಲ, ಸಂವಹನ ಕಲೆ ಕೌಶಲ್ಯ ಹೊಂದಿರುವ ಹಾಗೂ ಸಮುದಾಯದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ ನೀಡಲಾಗುವುದು.

 ಸ್ವ-ವಿವರ ಹಾಗೂ ಮೂಲ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

Exit mobile version