ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಮತ್ತು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿಯ ಕುರಿತು ಪ್ರಚಾರ ಮತ್ತು ನೋಂದಣಿ ಅಭಿಯಾನ ನಡೆಯಿತು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಮೋಹನ್ ಪೂಜಾರಿ ಉಪ್ಪುಂದ ಅವರು ಸರ್ಕಾರದ ಈ ಯೋಜನೆ ನಿರುದ್ಯೋಗಿ ಯುವ ಪೀಳಿಗೆಗೆ ತುಂಬಾ ಅನುಕೂಲಕರವಾಗಿದೆ. ಪದವಿ ಮುಗಿದು ಉದ್ಯೋಗ ಸಿಗದ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.

ಉದ್ಯೋಗ ವಿನಿಮಯ ಕಛೇರಿಯ ಸಿಬ್ಬಂದಿ ಲತಾ ಅವರು ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆ ಪಡೆದುಕೊಳ್ಳುವ ಬಗ್ಗೆ ಮತ್ತು ಮಾನದಂಡಗಳ ಕುರಿತು ಪೂರ್ಣ ಮಾಹಿತಿ ನೀಡಿದರು.
ಪ್ರಾಶುಪಾಲರಾದ ನಾಗರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸದಸ್ಯರಾದ ಬಾಬು ದೇವಾಡಿಗ, ಅನಿಶ್ ಕುಮಾರ್, ಸೂರ್ಯಕಾಂತಿ, ಮಾಲತಿ ಶಿವಾನಂದ್ ಮತ್ತು ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು. ಉಪನ್ಯಾಸಕರಾದ ವಿನೋದ್ ಅವರು ಕಾರ್ಯಕ್ರಮ ನಿರೂಪಿಸಿದರು.