Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗಾಗಿ, ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಒಟ್ಟಾರೆ ಶೇ. 35 ರಷ್ಟು ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಸಂಸ್ಥೆ ದೂ.ಸಂಖ್ಯೆ: 0820-2570244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version