Site icon Kundapra.com ಕುಂದಾಪ್ರ ಡಾಟ್ ಕಾಂ

ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ಹಗ್ಗ ಜಗ್ಗಾಟ ಸ್ಫರ್ಧೆ: ಆಳ್ವಾಸ್ ಚಾಂಪಿಯನ್ಸ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಮೂಡುಬಿದಿರೆ:
ಮಂಗಳೂರು ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ  ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಹಗ್ಗ ಜಗ್ಗಾಟ  ಸ್ಫರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ತಂಡವು ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು.

ಪುರುಷರ ವಿಭಾಗದಲ್ಲಿ ಆಳ್ವಾಸ್ ತಂಡವು ಸೆಮಿಫೈನಲ್‌ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ತಂಡವನ್ನು ಸೋಲಿಸಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿತು. ಫೈನಲ್‌ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತೆಂಕನಿಡಿಯೂರು ತಂಡವನ್ನು ಸೋಲಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು.

ಮಹಿಳಾ ತಂಡವು ಸೆಮಿಫೈನಲ್‌ನಲ್ಲಿ ಡಾ. ಜಿ. ಶಂಕರ್ ಸರ್ಕಾರಿ  ಮಹಿಳಾ ಕಾಲೇಜು, ಅಜ್ಜರಕಾಡು ತಂಡವನ್ನು ಪರಾಭವಗೊಳಿಸಿ, ಫೈನಲ್ ನಲ್ಲಿ  ಸರ್ಕಾರಿ  ಪ್ರಥಮ  ದರ್ಜೆ ಕಾಲೇಜು ತಂಡವನ್ನು ಸೋಲಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು.

ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ. 

Exit mobile version