Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಉಡುಪಿ ನಗರಸಭೆಯ 2023-24 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಅರ್ಹ ಆಸಕ್ತ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Exit mobile version